(೧)
ಸಂಜೆ ಎಂಟಕೆ ಬಿಡುವ
ಲೌಡ್ ಸ್ಪೀಕರಿನ
someಗೀತ
ಟ್ರಾವೆಲ್ ಬಸ್ಸು;
ಬೆಂಗಳೂರಿಂದ ಹದಿನೆಂಟು ತ್ರಾಸು
ರೆಪ್ಪೆಯಿಲ್ಲದ ಕಿವಿಯ ಮುಚ್ಚಲಾರದ ದಿಟಕೆ
ಕಣ್ಮುಚ್ಚಿ ಕೂತ
ಚಿತ್-
ಭಂಗಿ, ನಿದ್ರಾಯೋಗ
ನಟಿಸಿ, ವಟವಟಿಸಿ ಚಡಪಡಿಸಿ ಸಿಡಿವುದರೊಳಗೆ
ಕನ್ಯಾ
ಕು
ಮಾರಿ
ಬಿಸಿಲು-ಅಂಟು
ಮೈಯೆಲ್ಲ ಉಪ್ಪು
ಕಾರುವ ಕಡಲು
ಅಲೆ
ಯುವ ಮಂದೆ-
ಮಂದಿ
ರ
ದ ಒಳ ಹೊರಗೆ
ಕಡಲ ತಡಿಯಡಿಗಡಿಗೆ
ಕಾಗದ ಚೂರು
ಪ್ಲಾಸ್ಟೀಕು ಕವರು
ಕಚಪಚ ಕೆಸರು
ಚೆಲ್ಲುವ ವಿವೇಕ
ಸಾಗರದ
ನಡುವೆ ತಲೆಯೆತ್ತಿದ
ವಿವೇಕ
ಶಿಲೆಗೆ
ಲಾಂಚರು
ಕಾದುನಿಂತ ಮೈಲುದ್ದ ಕ್ಯೂ!
(೨)
ವಿವೇಕ ಮಂದಿರದಿ
ಧ್ಯಾನದಾನಂದದಾರಾಮ;
ತಂಪೆರೆವ ನಿಃಶಬ್ದ ನಿರ್ವಾತ ಧಾಮ;
ಗದ್ದಲದ ವಾಕ್ಯದಲಿದೊಂದು
ಅಲ್ಪ ವಿರಾಮ.
(೩)
ದಿನವೆಲ್ಲ ಉರಿದು ಸುಸ್ತಾಗಿ
ಪಡುಗಡಲಲ್ಲಿ ಮಲಗಲೆಳಸುವ ಸೂರ್ಯ;
ಕಡಲ ಹೊನ್ನೀರ್ ತುಳುಕಿ
ಸುತ್ತೆಲ್ಲ ಬಣ್ಣವೋ ಬಣ್ಣ;
ಸಂಜೆಬಾನಿನ ಕಾಂತಿ,
ಶಿಲೆಯ ನೆಲೆಯಿಂ ಹೊರಟು
ದಿಕ್ಕ ತುಂಬಿದ ಶಾಂತಿ -
ಶ್ರೀ ವಿವೇಕಾನಂದ ಚಿತ್ಛಾಂತಿ
(೪)
ಮುಂಜಾವಿನರುಣೋದಯದ
ಹೊನ್ನ ಕಿರಣದಲಿ
ತೀಡುತಿಹ ತಂಗಾಳಿ,
ದೇವಿಯ ಕೃಪೆಯ ಸುಯ್ಯುತಿಹ
ಉದಯರಾಗ;
ವರ್ಣಮಯವೀ ಬಾನು
ವರ್ಣಮಯವೀ ಕಡಲು
ವರ್ಣಮಯವದರ ಮಳಲು.
ಮುಂಜಾವ ಸಿಹಿಗನಸಲಿನ್ನೂ ಮಿಸುಗುವ ಸೂರ್ಯ
ಮೈತಿಳಿದು ಕಣ್ಹೊಸಕಿ ಉರಿಯ ಕೆದರುವ ಮುನ್ನ
ಕಟ್ಟುತ್ತೇನೆ ಜೋಳಿಗೆಯ,
ಮುಂದಿನೂರಿಗೆ ಪಯಣ.
ನನ್ನ ಇತರ ಬ್ಲಾಗುಗಳು
ಶೀರ್ಷಿಕೆಗಳು
- ೦೧. ಒಳಹೋಗುವ ಮುನ್ನ ಒಂದು ನಿಮಿಷ... (1)
- ೦೨. ಕವನಗಳು (32)
- ೦೩. ಅನುವಾದಿತ (12)
- ೦೪. ಹನಿ-ಮಿನಿ; ಚೂರು-ಚುಟುಕ (5)
- ೦೫. ಕೆಲವು ವಚನಗಳು (4)
- ೦೬. ಪ್ರಚಲಿತ (14)
- ೦೭. ಲಹರಿ (15)
- ೦೮. ಭಾಷೆ (16)
- ೦೯. ಪ್ರವಾಸ (2)
- ೧೦. ಚುಚ್ಚಿದ್ದು - ಕಚ್ಚಿದ್ದು (9)
- ೧೧. ವಿಚಾರ (4)
- ೧೨. ನಾಟಕ/ಮಾತು-ಕತೆ/ಪ್ರಹಸನ... (1)
- ೧೩. ವ್ಯಕ್ತಿಗಳು (6)
- ೧೪. ಅರ್ಥಚಿಂತನೆ (2)
- ೧೫. ಪುಸ್ತಕ (2)
- ೧೬. ಕಾವ್ಯದ ಕುಣಿತ (ಪ್ರಾಸ ಛಂದಸ್ಸು ಇತ್ಯಾದಿ) (3)
- ೧೭ ಪಾಕ (2)
- ೧೮ ಸಂಗೀತರಚನೆಗಳು (3)
- ೧೯. ಭಾರತೀಯಕಾವ್ಯಮೀಮಾಂಸೆ (1)
- ೨೦. ಹಬ್ಬ-ಹರಿದಿನ (1)
- ೯೮. ಇತ್ಯಾದಿ... (6)
- ೯೯. ಇತರ ಬ್ಲಾಗ್ ಬರಹ ಸೇರ್ಪಡೆಗಳು (6)
Thursday, October 29, 2009
Subscribe to:
Post Comments (Atom)
4 comments:
ಕನ್ಯಾಕುಮಾರಿಯ ಯಥಾವತ್ ಚಿತ್ರಣ!
ಕನ್ಯಾಕುಮಾರಿಯನ್ನು ಪಕ್ಕದ ಬೃಹತ್ ಚರ್ಚಿಗರು ದೊಡ್ಡದಾಗಿ "ಕನ್ನಿಕಾ ಮೇರಿ" ಎಂದಬ್ಬರಿಸಿ ಪರಿಚಯಿಸುತ್ತಾರೆ ಮತ್ತು "ಪ್ರಚಾರ" ಮಾಡುತ್ತಾರೆ!
"ಮಾರಿ
ಬಿಸಿಲು-ಅಂಟು
ಮೈಯೆಲ್ಲ ಉಪ್ಪು
ಕಾರುವ ಕಡಲು
ಅಲೆ
ಯುವ ಮಂದೆ-
ಮಂದಿ"
"ಗದ್ದಲದ ವಾಕ್ಯದಲಿದೊಂದು
ಅಲ್ಪ ವಿರಾಮ."
"ತೀಡುತಿಹ ತಂಗಾಳಿ,
ದೇವಿಯ ಕೃಪೆಯ ಸುಯ್ಯುತಿಹ
ಉದಯರಾಗ;"
ನನಗಿಷ್ಟವಾದ ಸಾಲುಗಳು, ನಿಮ್ಮದೇ ಛಾಪನ್ನು ಹೊತ್ತಿವೆ. ಆದರೂ ನಿಮ್ಮ ಇತರ ಕವನಗಳು, ಅವುಗಳ depth and directionನ benchmarkಗೆ ಹೋಲಿಸಿದಾಗ, ಈ ಕವನ ಅದೇಕೋ ಪೇಲವವೆನ್ನಿಸಿತು.
'ಕಾರುವ ಕಡಲು
ಅಲೆ
ಯುವ ಮಂದೆ-
ಮಂದಿ
ರ
ದ ಒಳ ಹೊರಗೆ'
ಪದಗಳ ಬಳಕೆ,ಛೇದನ - ಪಾಠ ಕಲಿಸುವಂತಿವೆ. ಖುಶಿಯಾಯ್ತು.
'ಹದಿನೆಂಟು ತ್ರಾಸು' - ಸೂಪರ್
'ಧ್ಯಾನದಾನಂದದಾರಾಮ' - ಅದ್ಭುತವಾದ ಪ್ರಯೋಗ. ಧ್ಯಾನದ ಆನಂದದ ಆರಾಮ - ವಾವ್!
someಗೀತ - ಇದು ಸ್ವಲ್ಪ ಕ್ಲೀಷೆ ಅನ್ನಿಸ್ತು...ತುಂಬಾ ಜನ ತುಂಬಾ ಕಡೆ ಅನವಶ್ಯಕವಾಗಿ ಬಳಸಿರುವುದರಿಂದಲೋ ಏನೋ ಈ ಪ್ರಯೋಗ ಅಷ್ಟು ಪ್ರಭಾವಶಾಲಿ ಅನ್ನಿಸಲಿಲ್ಲ.
(ಬಿಜೆಪಿ ಸರ್ಕಾರ 'ಶೋಭಾ'ಯಮಾನವಾಗಿ ಮಿನುಗದ ರೀತಿ!) :)
Post a Comment